November 22, 2024

ಸಾರಥಿ ನಗರದಲ್ಲಿರುವ ಮಸೀದಿಯು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆ ಅದನ್ನು ತೆರವುಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಮಾಡಲಾಯಿತು.

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಸಭೆ ಮಾಡಿ ಸಾರಥಿ ನಗರದಲ್ಲಿರುವ ಮಸೀಧಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದೆ, ಅದನ್ನುಡೆಮೋಲಿಸ್ ಮಾಡುವಂತೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು ಇಂದು ಈ ವಿಚಾರವಾಗಿ ಮಹಾನಗರ ಪಾಲಿಕೆ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಸಕಾರಾತ್ಮಕ ಪ್ರತಿಕ್ರಿಯೇ ನೀಡಿದ್ದಾರೆ ಎಂದು ಮಾಜಿ ಶಾಸಕ ಸಂಜೇಯ ಪಾಟೀಲ ತಿಳಿಸಿದರು.

ಮೊದಲು ಮನೆ ಕಟ್ಟಲು ಮಹಾನಗರ ಪಾಲಿಕೆಯಿಂದ ಅನುಮತಿ ಪಡೆದು, ಖಾಸಗಿ ಸ್ಥಳದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ. ಸಾರ್ವಜನಿಕ ಸ್ಥಳವಾಗಿದ್ದರೆ ಸ್ಕೂಲ್ ಕಾಲೇಜ್, ಮಸೀದಿ, ಮಂದಿರ ಕಟ್ಟಬಹುದಿತ್ತು, ಆದರೆ‌ ಖಾಸಗಿ ಸ್ಥಳದಲ್ಲಿ ಮಸೀದಿ ನಿರ್ಮಾಣ ಮಾಡಿರುವುದು ಕಾನೂನಿನ ಬಾಹಿರವಾಗಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತರನ್ನು ಕರೆದು ಸಭೆ ಮಾಡಿ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಎರಡು ದಿನದಲ್ಲಿ ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಸಂಜೇಯ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ ಮಹಾನಗರ ಪಾಲಿಕೆ ಆಯುಕ್ತರ ಹಾಗೂ ಪೊಲೀಸ್ ಆಯುಕ್ತರ ಸಭೆ ಕರೆದು ಡಾಕಿಮೆಂಟ್ ಪರಿಶೀಲನೆ ಮಾಡಿ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.

Leave a Reply

Your email address will not be published. Required fields are marked *