September 8, 2024

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ವೀರ ಜ್ಯೋತಿಯನ್ನು ರಾಮದುರ್ಗ ತಾಲೂಕ ಆಡಳಿತದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ವೀರಜೋತಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.

ಸಂಗೊಳ್ಳಿ ರಾಯಣ್ಣನ ಸವಿನೆನಪಿಗಾಗಿ ಕರ್ನಾಟಕ ಸರ್ಕಾರ ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ಹಮ್ಮಿಕೊಂಡಿದೆ ಕೊರೋನ ಹಿನ್ನೆಲೆಯಲ್ಲಿ ಕಳೆದೆರಡು ವರ್ಷದಿಂದ ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಬಂಧವಿತ್ತು ಆದರೆ ಈ ವರ್ಷ ಉತ್ಸವವನ್ನು ಸಂಗೊಳ್ಳಿ ರಾಯಣ್ಣನ ಹುಟ್ಟೂರಾದ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಜನವರಿ 12 ಮತ್ತು 13ನೇ ತಾರೀಖಿನಂದು ಸರಕಾರ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದೆ, ಇಡೀ ಜಿಲ್ಲೆಯಾದ್ಯಂತ ಸಂಚರಿಸಿದ ವೀರ ಜ್ಯೋತಿ ಇಂದು ರಾಮದುರ್ಗ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಅದ್ದೂರಿಯಾಗಿ ಸ್ವಾಗತಿಸಿ ವಿವಿಧ ವಾದ್ಯ ಮೇಳದೊಂದಿಗೆ ಪಟ್ಟಣದ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು
ಈ ಸಂದರ್ಭದಲ್ಲಿ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ್, ತಾಲೂಕ ಪಂಚಾಯಿತಿ ಇಒ ಪ್ರವೀಣ್ ಕುಮಾರ್ ಸಾಲಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರೇನಪ್ಪ ಸೋಮಗೊಂಡ, ಸೋಮಶೇಖರ ಸಿದ್ಲಿಂಗಪ್ಪನವರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *