ಹೌದು ಮಲಪ್ರಭಾ ಎಡದಂಡೆ ಕಾಲುವೆಯಲ್ಲಿ ಯುವಕನ ಶವ ಪತ್ತೆ
ಕೈ ಕಾಲು ಕಟ್ಟಿರುವ ಸ್ಥಿತಿಯಲ್ಲಿ ಮಲಪ್ರಭಾ ನದಿಯ ಎಡದಂಡೆ ಕಾಲುವೆಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದ ಹತ್ತಿರ ನಡೆದಿದೆ ಮಲಪ್ರಭಾ ಎಡದಂಡೆ ಕಾಲುವೆಯ ಬ್ರಿಜ್ ಹತ್ತಿರ ಈ ಶವ ಪತ್ತೆಯಾಗಿದ್ದು
ಮೃತ ಯುವಕ ಮನಿಹಾಳ ಗ್ರಾಮದ 24 ವರ್ಷದ ಚಿನ್ನಪ್ಪ ಕಳಸನ್ನವರ ಎಂದು ತಿಳಿದುಬಂದಿದೆ.
ಮಂಗಳವಾರ ಮನೆಯಿಂದ ಯುವಕ ಕಾಣೆಯಾದ ಬಗ್ಗೆ ಕುಟುಂಬಸ್ಥರು ರಾಮದುರ್ಗ ಠಾಣೆಯಲ್ಲಿ ದೂರು ನೀಡಿದರು ಎಂದು ಹೇಳಲಾಗಿದೆ. ಯುವಕನ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದನ್ನು ಕಂಡು ಕುಟುಂಬಸ್ಥರು ತಮ್ಮ ಮಗ ಕೊಲೆಯಾಗುದ್ದಾನೆಂದು ಸಂಶಯ ವ್ಯಕ್ತಪಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಗೆ ರವಾಣಿಸಲಾಗಿದೆ.
ಘಟನಾ ಸ್ಳಳಕ್ಕೆರಾಮದುರ್ಗ ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಪಟ್ಟಣಶೇಟ್ಟಿ ಪಿಎಸ್ಐ ಶಿವಾನಂದ ಕಾರಜೋಳ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ಘಟನೆ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.