ಅಥಣಿ : ಅಥಣಿಯ 110 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ಬೃಹತ್ ವಿದ್ಯುತ್ ಅವಘಡ ಸಂಭವಿಸಿ, ಬೆಂಕಿ ತನ್ನ ಕೆನ್ನಾಲಿಗೆ ಚಾಚಿ ಇಡೀ ವಿದ್ಯುತ್ ಕೇಂದ್ರವನ್ನೇ ವ್ಯಾಪಿಸುವಷ್ಟು ಜ್ವಾಲೆ ಹರಡಿ ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.
ಅಥಣಿ ಪಟ್ಟಣದ ವಿಜಯಪೂರ ರಸ್ತೆಗೆ ಹೊಂದಿಕೊಂಡ ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ ಸುಮಾರು 09:15 ಕ್ಕೆ ನಿಖರ ಕಾರಣ ಗೊತ್ತಿಲ್ಲ ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯ ತೀವೃತೆ ಹೆಚ್ಚಾಗಿದ್ದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿವೆ, ಬೆಂಕಿ ಆರಿಸಲು ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಸಾವು ನೋವು, ಹಾನಿಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.