ಬಿ ನ್ಯೂಸ್ ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರು ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಕ್ಷರಿ, ರಾಜ್ಯ ಸರ್ಕಾರ ಎರಡು ಆದೇಶವನ್ನು ಹೊರಡಿಸಿದ ಹಿನ್ನಲೆಯಲ್ಲಿ ಮುಷ್ಕರವನ್ನು ಹಿಂಪಡೆಯ ಲಗುತ್ತಿದೆ. ಸರ್ಕಾರ ಶೇ.17ರಷ್ಟು ವೇತನ ಹೆಚ್ಚಳ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ ಎನಪಿಎಸ್ ಬಗ್ಗೆ ಪರಿಶೀಲನೆ ಆದೇಶ ಮಾಡಿದ ಕಾರಣ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ ಘೋಷಣೆ ಮಾಡಲಾಗಿದೆ ಯೆಂದು ತಿಳಿಸಿದರು.
ರಾಜ್ಯ ಸರ್ಕಾರದ ಆದೇಶವನ್ನು ಸರ್ಕಾರಿ ನೌಕರರು ಒಪ್ಪಿರುವುದರಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯುವುದಾಗಿ ತಿಳಿಸಿದರು. ಸರ್ಕಾರಿ ನೌಕರರಿಗೆ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಇವರು ಸೂಚಿಸಿದರು. ದೂರದಲ್ಲಿರುವರು ನಾಳೆಯಿಂದ ಕೆಲಸಕ್ಕೆ ಹಾಜರಾಗುತ್ತಾರೆ. ಒಟ್ಟಿನ್ನಲ್ಲಿ ನಾಳೆಯಿಂದ ಎಲ್ಲಾ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗುತ್ತಾರೆ ಎಂದ ಇವರು ಈ ಸುದ್ದಿಗೋಷ್ಠಿಯ ಮುಖಾಂತರ ತಿಳಿಸಿದ್ದಾರೆ.