ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಂಬಂಧ, ನಿನ್ನೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು
ಸತತ 2 ಗಂಟೆ ನಡೆದಂತ ಸಭೆ ಅಂತ್ಯಗೊಂಡ ನಂತರ , ಅಂತಿಮವಾಗಿ ಇಂದು ಮತ್ತೊಂದು ಸುತ್ತಿನ ಸಭೆ ಬಳಿಕ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಹಾಗೂ ಬಿಜೆಪಿಯ ಕೆಲ ನಾಯಕರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯ ನಾಯಕರು ಬಿಜೆಪಿ ಕೇಂದ್ರೀಯ ಚುನಾವಣಾ ಸಭೆಯಲ್ಲಿ ಪಾಲ್ಗೊಂಡಿದ್ದರು . ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಸೇರಿ ಮೊದಲ ಪಟ್ಟಿ ಬಿಡುಗಡೆಯ ಬಗ್ಗೆ ಚರ್ಚೆ ನಡೆಸಿದರು.
ಕೇಂದ್ರ ಸಂಸದೀಯ ಮಂಡಳಿ ಸಭೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಿತು. ಸೋಮವಾರ ಮತ್ತೊಂದು ಸಭೆ ಮಾಡಲಿದ್ದೇವೆ. ಆ ಸಭೆಯ ಬಳಿಕ ಪಟ್ಟಿ ಬಿಡುಗಡೆ ಮಾಡಲಿದ್ದೇವೆ. ನಾನು ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದರು , .
ಒಟ್ಟಾರೆಯಾಗಿ ಇವತ್ತು ಬಿಜೆಪಿ ಸಿಇಸಿ ಸಭೆಯ ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ. ಅಲ್ಲಿಯವರೆಗೆ ಯಾವ ಕ್ಷೇತ್ರಗಳಿಗೆ, ಯಾರಿಗೆ ಟಿಕೆಟ್ ನೀಡಲಾಗಿದೆ ಎನ್ನುವುದನ್ನು ಕಾದು ನೋಡಬೇಕಿದೆ.