ರಾಜ್ಯದಲ್ಲಿ May 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇದರ ಮಧ್ಯೆ ತಮ್ಮ ಪರ ಕೆಲವೊಂದು ಸಮೀಕ್ಷೆಗಳು ಇರುವ ಕಾರಣದಿಂದ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ ಎಂಬ ವಿಶ್ವಾಸದಲ್ಲಿರುವ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ
ಇದರ ಜೊತೆಗೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರವೂ ಕೋಡಾ ಕೇಳಿ ಬರುತ್ತಿದ್ದು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಂದರ್ಶನ ಒಂದರಲ್ಲಿ ಆಡಿದ ಮಾತು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಸರಿಯಾದ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ತಮ್ಮ ಮಾತುಗಳನ್ನು ತಿರುಚಲಾಗಿದೆ ಎಂದಿದ್ದರು.
ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯದ ಮುಖ್ಯಮಂತ್ರಿಯಾದರೆ ಇದಕ್ಕೆ ನನ್ನ ಸಂಪೂರ್ಣ ಒಪ್ಪಿಗೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿದ್ದರು. ಇದೆಲ್ಲದರ ಮದ್ಯೆ ಇಂದು ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುವ ಸಲುವಾಗಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹೆಲಿಪ್ಯಾಡ್ ಗೆ ಬಂದ ವೇಳೆ ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಕಾಂಗ್ರೆಸ್ ಬೆಂಬಲಿಗರು ಘೋಷಣೆ ಕೂಗಿದ್ದಾರೆ.