ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ತಿಂಗಳಿಗೂ ಕಡಿಮೆ ದಿನ ಬಾಕಿಯಿದೆ. ಆದರೆ, ಬಿಜೆಪಿ ಮಾತ್ರ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಿಲ್ಲ.ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಪುತ್ರನಿಗೆ ಟಿಕೆಟ್ ಕೊಡಿಸುವ ಹಿನ್ನಲೆ : ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ
ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸೋ ಕಸರತ್ತನ್ನು ತೆರೆ ಮರೆಯಲ್ಲಿ ನಡೆಸುತ್ತಿದ್ದರು. ಈ ಬೆನ್ನಲ್ಲೇ ಅವರು ಕಳೆದ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಸಕ್ರಿಯರಾಗಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಈ ಹಿನ್ನಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ.ಚುನಾವಣಾ ರಾಜಕೀಯದಿಂದ ದೂರ ಇರುವುದಾಗಿ ಪ್ರಕಟಿಸಿದ್ದಾರೆ. ಇದನ್ನು ಹೊಸ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್ ಬಿಜೆಪಿಯ ವಿರುದ್ಧ ಲೇವಡಿ ಮಾಡಿದೆ.ಬಿಜೆಪಿ ಕಡೆಯಿಂದ ಅಭ್ಯರ್ಥಿಗಳ ಪಟ್ಟಿ ಹೊರಬರುವ ಬದಲು ರಾಜಕೀಯ ನಿವೃತ್ತಿ ಪಡೆಯುವವರ ಪಟ್ಟಿ ಹೊರಬರುತ್ತಿವೆ!
ಟಿಕೆಟ್ ಘೋಷಣೆಯಾಗುವ ಬದಲು ವಿಕೆಟ್ ಬೀಳುತ್ತಿವೆ! ಮಂತ್ರಿಗಿರಿಗಾಗಿ ಲಾಭಿ ಮಾಡಿ ಸುಸ್ತಾದ ಕೆಎಸ್ ಈಶ್ವರಪ್ಪ ಈಗ ಟಿಕೆಟ್ಗೂ ಲಾಭಿ ನಡೆಸಿ ಸುಸ್ತಾದರು.ಬಿಜೆಪಿಯ ಅವಮಾನ ಸಹಿಸದೆ ರಾಜಕೀಯದಿಂದಲೇ ಪಲಾಯನ ಮಾಡಿದರು ಎಂದು ವ್ಯಂಗ್ಯವಾಗಿ ಕಾಂಗ್ರೆಸ್ ಟ್ವೀಟ್ ಮಾಡಿದೆ .