ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೇಸ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು …ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯು ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ,189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ.
ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಹಾಗೂ ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಎಂದು ಹೇಳಿದರುಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯ, ರಾಜ್ಯ ಬಿಜೆಪಿ ಸಹ ಚುನಾವಣಾ ಉಸ್ತುವಾರಿ ಕೆ.ಅಣ್ಣಾ ಮಲೈ, ಕೇಂದ್ರ ಗಣಿ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 52 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಒಬಿಸಿ 32, ಎಸ್ಸಿ 30, ಎಸ್ಟಿ 16 ಹಾಗೂ 9 ವೈದ್ಯರು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಟಿಕೆಟ್ ನೀಡಲಾಗಿದೆ.8 ಮಂದಿ ಮಹಿಳೆಯರು, ಐವರು ವಕೀಲರು, ಮೂವರು ಶಿಕ್ಷಕರು, 9 ಸ್ನಾತಕೋತ್ತರ ಪದವೀಧರರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.