ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರ ಮೇಲೆ ಆರೋಪ. ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆ್ಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಸುಧೀರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವಂಚನೆಗೀಡಾಗಿರುವ ಯುವತಿ ಸೇರಿ ಒಟ್ಟು 21 ಮಂದಿ ಸುಧೀರ ಮೇಲೆ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಸುಧೀರ್ ಹಾಗೂ ಇತರರು, ಜನರನ್ನು ವಂಚಿಸುವ ಉದ್ದೇಶದಿಂದ ಅಪರಾಧಿಕ ಸಂಚು ರೂಪಿಸಿ ಆ್ಯಪ್ ಅಭಿವೃದ್ಧಿಪಡಿಸಿದ್ದಾರೆ. ಆ್ಯಪ್ ಪ್ರಚಾರಕ್ಕಾಗಿ ಅಮಾಯಕ ಯುವಕ–ಯುವತಿಯರನ್ನು ಬಳಸಿಕೊಂಡಿದ್ದಾರೆ’ ಹೆಚ್ಚು ಡೌನ್‌ಲೋಡ್ ಮಾಡಿಸಿದರೆ ಹಾಗೂ ಚಂದಾರಾರನ್ನಾಗಿ ಮಾಡಿಸಿದರೆ, ಪ್ರತಿ ತಿಂಗಳು ₹ 15 ಸಾವಿರ ಸಂಬಳ ನೀಡುವುದಾಗಿ ಹೇಳಿದ್ದರು. ಅದರಂತೆ ಹಣ ಗಳಿಸಬಹುದೆಂದು ಯುವಕ–ಯುವತಿಯರು, ತಿಳಿದು ಸಂಬಂಧಿಕರು ಹಾಗೂ ಸ್ನೇಹಿತರನ್ನೇ ಚಂದಾದಾರರನ್ನಾಗಿ ಮಾಡಿಸಿದ್ದರು.’‘
ಯುವಕ–ಯುವತಿಯರಿಂದ ಎಲ್ಲ ಕೆಲಸ ಮಾಡಿಸಿಕೊಂಡ ಕಂಪನಿಯವರು, ನಿಗದಿತ ದಿನದೊಳಗೆ ಸಂಬಳ ನೀಡಿಲ್ಲ . ಕೆಲಸಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಯಾವುದೇ ಮಾಹಿತಿ ನೀಡಿಲ್ಲ. ಕಾರಣ ನೀಡದೇ ಎಲ್ಲರನ್ನೂ ಕೆಲಸದಿಂದ ತೆಗೆದಿದ್ದಾರೆ’ ಎಂದು ದೂರಿನಲ್ಲಿದೆ.
ಈ ‘ಪ್ರಕರಣ ಸಂಬಂಧ ತನಿಖೆ ಆರಂಭಸಲಾಗಿದೆ. ಹೀಗಾಗಿ, ವಿಚಾರಣೆಗೆ ಬರುವಂತೆ ಸುಧೀರ್‌ಗೆ ನೋಟಿಸ್ ನೀಡಲಾಗಿತ್ತು. ಅದರಂತೆ ಸುಧೀರ್ ಠಾಣೆಗೆ ಬಂದಿದ್ದಾರೆ. ವಿಚಾರಣೆ ಆರಂಭಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು..ವಿಚಾರಣೆಗಾಗಿ ತನಿಖಾಧಿಕಾರಿ ಎದುರು ಹಾಜರಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳಾದ ಸುಧೀರ್ ಹಾಗೂ ಇತರರು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಕೋಡಾ ಪಡೆದುಕೊಂಡಿದ್ದಾರೆ