ಬಿಜೆಪಿ ಮೊದಲ ಪಟ್ಟಿಯಲ್ಲಿ ಜಿಲ್ಲೆ ಎಲ್ಲ ಕ್ಷೇತ್ರಗಳಿಗೂ ಟಿಕೆಟ್ ಹಂಚಿಕೆಯಾಗಿದ್ದು, ಬಿಜೆಪಿ ನಡೆ ಚರ್ಚೆಗೆ ಗ್ರಾಸವಾಗಿದೆ..
ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ಹಾಲಿ ಶಾಸಕರಿಗೆ ಕೈತಪ್ಪಿದ ಬಿಜೆಪಿ ಟಿಕೆಟ್ . ಇನ್ನೊಂದೆಡೆ, 18 ಕ್ಷೇತ್ರಗಳ ಪೈಕಿ ಏಳು ಕಡೆ ಹೊಸ ಮುಖಗಳಿಗೇ ಟಿಕೆಟ್ ಘೋಷಣೆ . .ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಹಾಗೂ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೈಬಿಡಲಾಗಿದೆ.
ಇದಕ್ಕೆ ಪ್ರತಿಯಾಗಿ ಉತ್ತರದಲ್ಲಿ ಲಿಂಗಾಯತ ಸಮುದಾಯದ ಅಭ್ಯರ್ಥಿ ಡಾ.ರವಿ ಪಾಟೀಲ , ರಾಮದುರ್ಗದಲ್ಲಿ ಹೊರಗಿನಿಂದ ಬಂದ ಚಿಕ್ಕರೇವಣ್ಣ ಎಂಬ ಬೆಂಗಳೂರಿನ ಉದ್ಯಮಿಗೆ ಟಿಕೆಟ್ ನೀಡಿದ್ದಾರೆಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಟಿಕೆಟ್ ನೀಡಲಾಗಿದೆ.
ಸಚಿವರಾಗಿದ್ದ ಉಮೇಶ ಕತ್ತಿ ಅವರ ಪುತ್ರ ನಿಖಿಲ್‌ಗೆ ಹುಕ್ಕೇರಿ ಕ್ಷೇತ್ರದಲ್ಲಿ ಟಿಕೆಟ್ ನಿಡಿದೆ
ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲು ಹಟ ತೊಟ್ಟಿದ್ದ ಶಾಸಕ ರಮೇಶ ಜಾರಕಿಹೊಳಿ ಈಗ ಸಫಲರಾಗಿದ್ದಾರೆ.ಮೂರು ಕ್ಷೇತ್ರಗಳಲ್ಲಿ ತಾವು ಗುರುತಿಸಿದ ಬಿಜೆಪಿ ಅಭ್ಯರ್ಥಿಗಳಿಗೇ ಟಿಕೆಟ್ ದಕ್ಕಿಸಿಕೊಟ್ಟಿದ್ದಾರೆ.ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಬಂದ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಟಿಕೆಟ್ ಪಡೆದಿದ್ದಾರೆ.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಮಣಿಸಲು, ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ ಮನ್ನೋಳಕರ ಅವರಿಗೆ ಟಿಕೆಟ್ ಪಡೆಯುವಲ್ಲಿಯೂ ರಮೇಶ ಜಾರಕಿಹೊಳಿ ಯಶಸ್ಸು ಪಡೆದಿದ್ದಾರೆ .
ಒಂದೇ ಮನೆಯ ಇಬ್ಬರಿಗೆ ಬಿಜೆಪಿ ಟಿಕೆಟ್
ಉಮೇಶ ಕತ್ತಿ ಅವರ ಪುತ್ರ ನಿಖಿಲ್ ಹಾಗೂ ಸಹೋದರ ರಮೇಶ ಮಧ್ಯೆ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ ಎಂದೇ ಸುದ್ದಿ ಹರಿದಾಡುತೀತ್ತು . ಆದರೆ, ಬಿಜೆಪಿ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಇಬ್ಬರಿಗೂ ಟಿಕೆಟ್ ನೀಡಿದೆ .
ಗಣೇಶ ಹುಕ್ಕೇರಿ ಅವರ ವಿರುದ್ಧ ರಮೇಶ ಕತ್ತಿ ಸಮರ್ಥ ಅಭ್ಯರ್ಥಿ ಎಂಬ ಮಾತುಗಳು ಬಿಜೆಪಿಯಲ್ಲಿ ಬಹುದಿನಗಳಿಂದ ಚರ್ಚೆಗೆ ಬಂದಿದ್ದವು. ಈಗ ಅದಕ್ಕೂಬಿಜೆಪಿ ಇಂದ ತೆರೆ ಬಿದ್ದಿದೆ.
ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿ ಹೊಸ ಮುಖಕ್ಕೆ ಟಿಕೆಟ್ ನೀಡಿದ್ದು ಹೊಸಬರಾದ ಬಸವರಾಜ ಹುಂದ್ರಿ ಅವರಿಗೆ ಮಣೆ ಹಾಕಲಾಗಿದೆ.
ಬೈಲಹೊಂಗಲ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಜಗದೀಶ ಮೆಟಗುಡ್ಡ ಅವರಿಗೆ ಬಿಜೆಪಿ ಮತ್ತೊಂದು ಅವಕಾಶ ನೀಡಲಾಗಿದೆ.
ಖಾನಾಪುರದಲ್ಲಿ ಕಳೆದ ಬಾರಿ ಅತ್ಯಂತ ಕಡಿಮೆ ಮತಗಳ ಅಂತರದಿಂದ ಸೋತಿದ್ದ ವಿಠಲ ಹಲಗೇಕರ ಅವರಿಗೆ ಬಿಜೆಪಿಯ ಮತ್ತೊಂದು ಅವಕಾಶ ನೀಡಲಾಗಿದೆ.