September 20, 2024

ಮೇ 30ರಂದು ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸಂಚಾರವನ್ನು ಆರಂಭಿಸಲಾಗುವುದು ಎಂದು ನೈರುತ್ಯ ರೈಲ್ವೆ ವಲಯ ತಿಳಿಸಿದೆ.ಈಗಾಗಲೇ ರಾಜ್ಯದಲ್ಲಿ ಮೊದಲನೆಯದಾಗಿ ಮೈಸೂರು ಚೆನ್ನೈ ನಡುವೆ ವಂದೇ ಭಾರತ್‌ ರೈಲು ಓಡಾಟ ನಡೆಸುತ್ತಿದೆ. ಈ ಮೂಲಕ ರಾಜ್ಯದಲ್ಲಿ ಎರಡನೇ ವಂದೇ ಭಾರತ್‌ ರೈಲು ಓಡಾಟ ನಡೆಸಲಿದ್ದು ಸೆಮಿಸ್ಪೀಡ್‌ ರೈಲಿನಲ್ಲಿ ಓಡಾಡಬೇಕು ಎಂಬ ಜನರ ಕನಸು ಶೀಘ್ರದಲ್ಲಿಯೇ ನನಸಾಗಲಿದೆ.

ಏ.30ರ ವೇಳೆ ಬಹುತೇಕ ಕಾಮಗಾರಿ ಪೂರ್ಣಗೊಳ್ಳಲಿದೆ ..ಈ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಸಂಪೂರ್ಣಗೊಂಡಿದೆ. ಮಾ.31ರಂದು ಪ್ರಾಯೋಗಿಕವಾಗಿ ಹುಬ್ಬಳ್ಳಿ-ದೇವರಗುಡ್ಡ ಮಧ್ಯೆ ಓಡಿಸಲಾಗಿದೆ.ಅದೇ ರೀತಿ ಹುಬ್ಬಳ್ಳಿ-ಸಂಶಿ ಹಾಗೂ ಹಾವೇರಿ ಯಾರ್ಡ್‌ನಲ್ಲಿ ಏ 12ರಂದು ಪ್ರಾಯೋಗಿಕವಾಗಿ ರೈಲು ಓಡಿಸಲಾಗುವುದು.ಏ.30ರ ವೇಳೆಗೆ ಎಲ್ಲವನ್ನು ಸರಿದೂಗಿಸಿಕೊಂಡು ಮೇ 30ರಂದು ಧಾರವಾಡ-ಬೆಂಗಳೂರು ವಿದ್ಯುದ್ದೀಕರಣ ಮಾರ್ಗದಲ್ಲಿ ವಂದೇ ಭಾರತ ರೈಲು ಪೂರ್ಣ ಪ್ರಮಾಣದಲ್ಲಿಓಡಿಸಲಾಗುವುದು ಎಂದು ವಲಯದ ವಿದ್ಯುದ್ದೀಕರಣ ವಿಭಾಗದ ಮುಖ್ಯ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಂದೇ ಭಾರತ್‌ ರೈಲಿನ ವಿಶೇಷತೆ ಎಂದರೆ

ದೇಶದ ಅತಿ ವೇಗದ ರೈಲು ಅಂದರೆ ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಐಶಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದ್ದು, ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರೀಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ. ವಂದೇ ಭಾರತ್‌ ರೈಲಿನಲ್ಲಿ ಆನ್‌ಬೋರ್ಡ್‌ ಉಪಾಹಾರದ ವ್ಯವಸ್ಥೆ ಇದೆ. ರೀಡಿಂಗ್‌ ಲೈಟ್‌ ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲು, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್‌ ಪಾಯಿಂಟ್‌, ಸಿಸಿ ಟಿವಿ, ಬಯೋ ಶೌಚಾಲಯ ವ್ಯವಸ್ಥೆ ಇದೆ

Leave a Reply

Your email address will not be published. Required fields are marked *