November 22, 2024

2023ರ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ.ಇವತ್ತಿನಿಂದ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ , ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.ನಾಮಪತ್ರಗಳನ್ನು ಸಲ್ಲಿಸಲು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಈ ಸಮಯದಲ್ಲಿ ಸಲ್ಲಿಸಬಹುದಾಗಿದೆ. ಏಪ್ರಿಲ್ 14 ಮತ್ತು 16 ರಂದು ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ.

ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದೆ , 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 24 ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ.

Leave a Reply

Your email address will not be published. Required fields are marked *