ರಾಜ್ಯ ಪಠ್ಯಕ್ರಮದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿತ್ತು , ಶಿಕ್ಷಣ ಇಲಾಖೆ ಮುಂಬರುವ 2023-24 ನೇ ಸಾಲಿನಿಂದ 5, 8 ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ, ಎಸ್‌ಎಸ್ ಎಲ್ ಸಿ ಮಾದರಿಯಲ್ಲಿ ಪೂರಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಹೀಗಾಗಿ ಪೂರಕ ಪರೀಕ್ಷೆ ನಡೆಸಿದ್ರೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶ ಇಲ್ಲ. ಬದಲಾಗಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ ಕಲಿಕೆಯಲ್ಲಿ ಸುಧಾರಣೆ ಮಾಡಿ, ಪೂರಕ ಪರೀಕ್ಷೆ ನಡೆಸಿ ಫಲಿತಾಂಶ ನೀಡಿ ಮುಂದಿನ ತರಗತಿಗೆ ಕಳುಹಿಸಲಾಗುತ್ತದೆ.
ಹಂತ ಹಂತವಾಗಿ ಶಾಲಾ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಶಿಕ್ಷಣದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಪೂರಕ ಪರೀಕ್ಷೆ ನಡೆಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.