ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಕೋವಿಡ್ ಪರೀಕ್ಷೆ ಮುಂಜಾಗ್ರತಾ ಕ್ರಮವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.
ಜನಸಂಖ್ಯೆ ಹಾಗೂ ಪಾಸಿಟಿವಿಟಿ ಆಧಾರದ ಮೇಲೆ ಪ್ರತಿನಿತ್ಯ ಕಡ್ಡಾಯವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲಾ ಐಎಲ್‌ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ. ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್‍ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.