September 17, 2024

ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಮೈಸೂರು ರಸ್ತೆಯ ಬಾಪೂಜಿ ನಗರದ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬರುವಾಗ ತಡೆಯಲು ಮುಂದಾದ ಕರ್ತವ್ಯ ನಿರತ ಸಂಚಾರ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ

ಘಟನೆಯಲ್ಲಿ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ ನ್ಯಾಮಗೌಡ ತಲೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಪೊಲೀಸ್‌ರು ಪ್ರಕರಣ ದಾಖಲಿಸಿದ್ದು, ಸವಾರನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *