ಬೆಳಗಾವಿ ಜಿಲ್ಲೆ ರಾಮದುರ್ಗ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಶೋಕ ಮ ಪಟ್ಟಣ ಆಡಳಿತ ಮಿನಿ ಸೌಧದಲ್ಲಿರುವ ಚುನಾವಣಾಧಿಕಾರಿಯ ಕಚೇರಿಯಲ್ಲಿ ನಾಮಪತ್ರ ಸಲ್ಲಸಿದರು
ಇದಕ್ಕೂ ಮೊದಲು ಅವರು ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ತಾಲೂಕು ಕಚೇರಿವರೆಗೆ ಕಾರ್ಯಕರ್ತರು, ಬೆಂಬಲಿಗರ ಜತೆ ಪಾದಯಾತ್ರೆ ಮೂಲಕ ಮೆರವಣಿಗೆಯಲ್ಲಿ ಆಗಮಿಸಿದರು.
ಈ ಸಂಧರ್ಭದಲ್ಲಿ ಮೆರವಣಿಗೆಯಲ್ಲಿ ಎಲ್ಲಾ ಕಾರ್ಯಕರ್ತರು ಕೇಸರಿ ಟವಲ್ಲ ಕಾಕಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡರು
ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮಹಾದೇವಪ್ಪ ಪಟ್ಟಣ ಸಾವಿರಾರು ಕಾರ್ಯಕರ್ತರು, ಬೆಂಬಲಿಗರ ಜತೆಗೆ ಬಂದು ನಾಮಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅಶೋಕ ಪಟ್ಟಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿ ನಾನು ಗೆಲುವು ಸಾಧಿಸಲಿದ್ದೇನೆ. ನಿರಂತರವಾಗಿ ಜನರೊಟ್ಟಿಗೆ ಇದ್ದು ಅವರ ಕಷ್ಟಕ್ಕೆ ಸ್ಪಂದಿಸಲಿದ್ದೇನೆ’ ಎಂದು ಅಶೋಕ್ ಪಟ್ಟಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.