September 20, 2024

ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಕರ್ತವ್ಯಕ್ಕೆ ಎಲ್ಲ ಇಲಾಖೆಗಳ ಸರ್ಕಾರಿ ಅಧಿಕಾರಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಚುನಾವಣಾ ಕರ್ತವ್ಯಕ್ಕೆ ಹಾಗೂ ತರಬೇತಿಗೆ ಗೈರು ಹಾಜರಾಗುವ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸುವುದಾಗಿ ಚುನಾವಣಾ ಆಯೋಗ ಖಡಕ್‌ ಸೂಚನೆ ರವಾನಿಸಿದೆ. ರಾಜ್ಯದಲ್ಲಿ ಪ್ರತಿಬಾರಿ ಚುನಾವಣೆ ಬಂದ ಸಂದರ್ಭದಲ್ಲಿ ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯದ ಕಾರ್ಯಗಳಿಗೆ ನಿಯೋಜನೆ ಮಾಡುವುದು ಸಾಮಾನ್ಯವಾಗಿದೆ.ಚುನಾವಣಾ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶವೂ ಕೂಡ ಇದೆ. ಆದರೆ, ಸರ್ಕಾರಿ ಅಧಿಕಾರಿಗಳು ವಿವಿಧ ನೆಪಗಳನ್ನು ಹೇಳಿಕೊಂಡು ಚುನಾವಣಾ ಕರ್ತವ್ಯಕ್ಕೆ ಹಾಜರಾಗದೇ ಗೈರು ಹಾಜರಾಗುತ್ತಾರೆ. ಇದರಿಂದ ಚುನಾವಣಾ ಕಾರ್ಯಗಳನ್ನು ನಡೆಸಲು ಆಯೋಗವು ಪರದಾಡಬೇಕಾಗುತ್ತದೆ. ಆದರೆ, ಕಳೆದ ಚುನಾವಣಾ ತರಬೇತಿಗೆ ಹಾಜರಾಗದ ಸರ್ಕಾರಿ ನೌಕರರಿಗೆ ಈಗಾಗಲೇ ನೋಟಿಸ್‌ ಜಾರಿಗೊಳಿಸಲಾಗಿದೆ. ಈಗ ಗೈರಾಗಿದ್ದ ಸರ್ಕಾರಿ ನೌಕರರಿಗೆ ಇನ್ನೊಂದು ಅವಕಾಶವನ್ನು ನೀಡಲಾಗುತ್ತಿದ್ದು, ಮತ್ತೊಮ್ಮೆ ನಡೆಸಲಾಗುವ ತರಬೇತಿಗೆ ಹಾಜರಾಗದಿದ್ದರೆ ಎಫ್‌ಐಆರ್‌ ದಾಖಲಿಸುವುದಾಗಿ ಖಡಕ್‌ ಎಚ್ಚರಿಕೆಯನ್ನು ಚುನಾವಣಾ ಆಯೋಗ ರವಾನಿಸಲಾಗಿದೆ.

Leave a Reply

Your email address will not be published. Required fields are marked *