November 22, 2024

ರಾಮದುರ್ಗ ಕ್ಷೇತ್ರದಲ್ಲಿ ಎದ್ದಿದ್ದಂತ ಬಿಜೆಪಿ ಬಂಡಾಯ ಕೊನೆಗೂ ಶಮನವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದಂತ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಅವರು ತಮ್ಮ ನಾಮಪತ್ರವನ್ನು ವಾಪಾಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ನಿನ್ನೆ ಶಾಸಕ ಮಹದೇವಪ್ಪ ಯಾದವಾಡ ಮನೆಗೆ ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್, ಈರಣ್ಣ ಕಡಾಡಿ ಭೇಟಿ ನೀಡಿ , ನಾಳೆ ನಾಮಪತ್ರ ತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ವಾಪಾಸ್ಸು ಪಡೆಯುವಂತೆ ಮನವೊಲಿಸಿ ಯಶಸ್ವಿಯಾಗಿದ್ದರು.

ನಾಯಕರ ಮಾತಿಗೆ ಒಪ್ಪಿದ್ದಂತ ಮಹದೇವಪ್ಪ ಯಾದವಾಡ ಅವರು, ಇಂದು ತಮ್ಮ ಬೆಂಬಲಿಗರ ಸಭೆ ಕರೆದು ತಿರ್ಮಾನ ಪ್ರಕಟಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ತನ್ನ ಬೆಂಬಲಿಗರ ಸಭೆಯಲ್ಲಿ ಚರ್ಚಿಸಿದ ಬಳಿಕ, ಸ್ವತಂತ್ರ ಅಭ್ಯರ್ಥಿಯಾಗಿ ತಾವು ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ ಎಂದು ಘೋಷಿಸಿದ್ದಾರೆ.

ಅಂದಹಾಗೇ ರಾಮದುರ್ಗ ಕ್ಷೇತ್ರದಿಂದ ಶಾಸಕ ಮಹದೇವಪ್ಪ ಯಾದವಾಡ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೇ ಬಿಜೆಪಿ ಹೈಕಮಾಂಡ್ ಅವರಿಗೆ ನೀಡದೇ, ಚಿಕ್ಕರೇವಣ್ಣಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ರಾಮದುರ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಾಮಪತ್ರ ಸಲ್ಲಿಸಿದ್ದರು. ಅವರನ್ನು ನಿನ್ನೆ ಬಿಜೆಪಿ ನಾಯಕರು ಮನವೊಲೀಸಲು ಯಶಸ್ವಿಯಾದ ಪರಿಣಾಮ, ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲಿದ್ದಾರೆ.

Leave a Reply

Your email address will not be published. Required fields are marked *