ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಅಭಿವೃದ್ಧಿ ಆಗುವುದಿಲ್ಲ. ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸೋಣ, ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಾಗಿದೆ ಎಂದು ಸುದ್ದಿಗಾರರೊಂದಿಗೆ ಅಮಿತ್ ಶಾ ಮಾತನಾಡಿದರು, .
ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಲಿಂಗಾಯತ ಸಿಎಂಗಳನ್ನು ಅವಮಾನಿಸಿದ್ದ ಕಾಂಗ್ರೆಸ್ ಪಕ್ಷ, ಆದರೆ ಬಿಜೆಪಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮೋಸ ಮಾಡಿದ್ದು ಜೆಡಿಎಸ್ ನವರು, ಜೆಡಿಎಸ್ ನವರು ಎಷ್ಟೇ ಸೀಟ್ ಗೆದ್ದರೂ ಕಾಂಗ್ರೆಸ್ ಜೊತೆಗೆ ಹೋಗುತ್ತಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಸ್ಪಷ್ಟ ಬಹುಮತ ನೀಡಿ ಎಂದು ಅಮಿತ್ ಶಾ ಹೇಳಿದ್ದಾರೆ.