ಕರ್ನಾಟಕ ವಿಧಾನ ಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯಲಿದೆ ಎಂದು ಟಿವಿ9 ಹಾಗೂ ಸಿವೋಟರ್ ಜಂಟಿಯಾಗಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿದು ಬಂದಿದೆ . 2018ರ ವಿಧಾನ ಸಭೆ ಚುನಾವಣೆಯಲ್ಲಿ ಶೇ. 38ರಷ್ಟು ಮತ ಹಂಚಿಕೆ ಪಡೆದಿದ್ದ ಕಾಂಗ್ರೆಸ್ ಈ ಬಾರಿ ಶೇ. 2ರಷ್ಟು ಹೆಚ್ಚು ಪಡೆದು ತನ್ನ ನಿರ್ವಹಣೆಯನ್ನು ಸುಧಾರಿಸಿಕೊಳ್ಳಲಿದೆ. ಅದೇ ರೀತಿ ಪ್ರತಿಪಕ್ಷ ಕಾಂಗ್ರೆಸ್ ಗರಿಷ್ಠ ಶೇ. 40 ಸ್ಥಾನ ಹಂಚಿಕೆ ಪಡೆಯುವ ನಿರೀಕ್ಷೆ ಇದೆ. ಅನಂತರ ಆಡಳಿತಾರೂಢ ಬಿಜೆಪಿ ಶೇ. 33.9 ಹಾಗೂ ಜೆಡಿಎಸ್ ಶೇ. 18.8 ಸ್ಥಾನ ಹಂಚಿಕೆ ಪಡೆಯುವ ನಿರೀಕ್ಷೆ ಇದೆ ಎಂದು ಸಮೀಕ್ಷೆ ತಿಳಿಸಿದೆ.
ಹಿಂದಿನ ವಿಧಾನ ಸಭೆ ಚುನಾವಣೆಯಲ್ಲಿ ಶೇ. 36 ಮತ ಹಂಚಿಕೆ ಪಡೆದಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಶೇ.33.9ಕ್ಕೆ ಕುಸಿಯಲಿದೆ ಎಂದು ಸಿವೋಟರ್ ಭವಿಷ್ಯ ನುಡಿದಿದೆ. ಈ ನಡುವೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ನ ತನ್ನ ಮತ ಹಂಚಿಕೆಯನ್ನು ಶೇ. 18 ರಿಂದ ಶೇ. 18.8ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಸ್ಪಲ್ಪ ಮಟ್ಟಿಗೆ ಸುಧಾರಿಸಿಕೊಳ್ಳಲಿದೆ. ಇತರ ಪಕ್ಷಗಳು 2018ರ ವಿಧಾನ ಸಭೆ ಚುನಾವಣೆಯಲ್ಲಿ ಶೇ. 8 ಮತ ಹಂಚಿಕೆ ಪಡೆದಿದ್ದು, ಈ ಬಾರಿ ಶೇ. 7.3 ಮತ ಹಂಚಿಕೆ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ 104 ಸ್ಥಾನಗಳನ್ನು ಪಡೆಯುವುದರೊಂದಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಅಲ್ಲದೆ, ಸರಳ ಬಹುಮತಕ್ಕೆ 8 ಸ್ಥಾನಗಳ ಕೊರತೆ ಉಂಟಾಗಿತ್ತು. ಈ ಬಾರಿ ಕಾಂಗ್ರೆಸ್ 106 ರಿಂದ 116 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಬಿಜೆಪಿ 79 ರಿಂದ 89 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಜೆಡಿಎಸ್‌ನಲ್ಲಿ ಕೂಡ ಸ್ಥಾನ ಹಂಚಿಕೆಯಲ್ಲಿ ಇಳಿಕೆಯಾಗುವ ನಿರೀಕ್ಷೆ ಇದ್ದು . ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಇತರ ಪಕ್ಷಗಳು 0ಯಿಂದ 5 ಸ್ಥಾನಗಳನನ್ನು ಗೆಲ್ಲಲಿದೆ ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯಿಸಲಾಗಿದೆ. ಕಾಂಗ್ರೆಸ್ ಮ್ಯಾಜಿಕ್ ನಂಬರ್ 113ರನ್ನು ದಾಟದೇ ಇರಬಹುದು ಅಥವಾ 113 ಅದಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲುಬಹುದು ಎಂದು ಸಮೀಕ್ಷೆ ಹೇಳಿದೆ.