ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರನ್ನು ವರ್ಚುವಲ್ ಸಂವಾದ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಇತರ ಪಕ್ಷಗಳ ನಡುವಿನ ದೊಡ್ಡ ವ್ಯತ್ಯಾಸವೆಂದರೆ ಕಾರ್ಯವಿಧಾನ. ನಮ್ಮ ವಿರೋಧಿಗಳ ಅಜೆಂಡಾ ಅಧಿಕಾರ ಹಿಡಿಯುವುದಾಗಿದೆ. ಮುಂಬರುವ 25 ವರ್ಷಗಳಲ್ಲಿ ದೇಶವನ್ನುಅಭಿವೃದ್ಧಿಪಡಿಸುವುದು, ಬಡತನದಿಂದ ಮುಕ್ತಗೊಳಿಸುವುದು ಮತ್ತು ಯುವಕರ ಸಾಮಥ್ರ್ಯವನ್ನು ಮುಂಚೂಣಿಯಲ್ಲಿರಿಸುವುದು ಬಿಜೆಪಿಯ ಉದ್ದೇಶ ಮತ್ತು ಅಜೆಂಡಾವಾಗಿದೆ ಎಂದರು.
ಮೇ 10ರಂದು ನಡೆಯಲಿ ರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿಗಳ ಪರ ಕರ್ನಾಟಕ ರಾಜ್ಯದ ಜನತೆಯ ಆಶೀರ್ವಾದ ಪಡೆಯಲು ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತೇನೆ. ಕರುನಾಡಿನಲ್ಲಿ ಬಿಜೆಪಿ ಗೆಲ್ಲವುದು ಖಚಿತವಾಗಿದೆ.ಬೂತ್ ಮಟ್ಟದಲ್ಲಿ ಗೆದ್ದರೆ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ. ಹೀಗಾಗಿ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ಲೋಕತಂತ್ರದ ಉತ್ಸವ ನಡೆಯುತ್ತಿದೆ. ಬಿಜೆಪಿ ಪ್ರತಿ ಬಾರಿ ಚುನಾವಣೆಯನ್ನು ಲೋಕತಂತ್ರದ ಉತ್ಸವವಾಗಿ ಸಂಭ್ರಮಿಸಿದೆ. ಭಗವಾನ್ ಬಸವೇಶ್ವರರ ಪವಿತ್ರ ಭೂಮಿ ಕರ್ನಾಟಕ. ಪ್ರತಿ ಬೂತ್‍ನಲ್ಲಿ ಕಾರ್ಯಕರ್ತರ ಕೆಲಸದಿಂದ ಕರ್ನಾಟಕದಲ್ಲಿ ಬಿಜೆಪಿಯನ್ನು ಅಭೂತವೂರ್ವ ಗೆಲುವು ಸಾಧಿಸಲು ಕಾರಣವಾಗಿದೆ.
ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಕೆಲಸದಿಂದಲೇ ನಾವು ಚುನಾವಣೆ ಗೆಲ್ಲುತ್ತೇವೆ. ಎರಡು ದಿನದಲ್ಲಿ ನಾನು ಕಾರ್ಯಕರ್ತರ ನಡುವೆ ಬರುತ್ತಿದ್ದೇನೆ. ಕರ್ನಾಟಕದ ಜನತೆಯ ಆಶೀರ್ವಾದ ಪಡೆಯಲು ಬರುತ್ತಿದ್ದೇನೆ ಎಂದು ಮೋದಿ ತಿಳಿಸಿದ್ದಾರೆ .