ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿ ಕುರಿತ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದು ಮತ್ತಷ್ಟು ಕಾವು ಪಡೆದುಕೊಂಡಿದೆ. ಇದರ ಮಧ್ಯೆ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮೇ 9 ರ ವರೆಗೂ ಇದನ್ನು ಜಾರಿ ಮಾಡಬಾರದು ಎಂದು ಸೂಚಿಸಿದೆ. ಹಾಲಿ ಇರುವ ಒಟ್ಟು ಮೀಸಲು ಮಿತಿಯನ್ನು ಶೇಕಡ 50 ರಿಂದ ಶೇಕಡ 75ಕ್ಕೆ ಹೆಚ್ಚಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಮೀಸಲಾತಿ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.
ಶೇಕಡ 50 ಮೀಸಲು ಮಿತಿಯನ್ನು ರದ್ದುಪಡಿಸಿದರೆ ಎಲ್ಲ ವರ್ಗಗಳಿಗೂ ಮೀಸಲು ಪಡೆಯಲು ಅನುಕೂಲವಾಗುತ್ತದೆ ಎಂದು ಪ್ರತಿಪಾದಿಸಿರುವ ಅವರು, ಹೀಗಾಗಿ ಜನಸಂಖ್ಯೆ ಆಧಾರದಲ್ಲಿ ಎಲ್ಲ ಜಾತಿಗಳಿಗೆ ಒಟ್ಟು ಮೀಸಲನ್ನು ಶೇಕಡ 75 ಕ್ಕೆ ಹೆಚ್ಚಿಸಬೇಕು ಎಂದು ಹೇಳಿದ್ದಾರೆ.