
ಗುರುವಾರ ನಗರದ ಸೈನಿಕ ನಗರದಲ್ಲಿ ಬೆಳಗಾವಿ ಉತ್ತರ ವಲಯದ ಕಾಂಗ್ರೆಸ್ ಅಭ್ಯರ್ಥಿ ಆಸೀಫ್ (ರಾಜು) ಸೇಠ್ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಇದರಲ್ಲಿ ಮಾಜಿ ಶಾಸಕ ಫಿರೋಜ್ ಸೇಠ್ ಮತ್ತು ಫೈಜಾನ್ ಸೇಠ್ ಅವರಿಗೆ ಸಾಥ್ ನೀಡಿದರು.
ಈ ಸಮಯದಲ್ಲಿ ಜನರು ಅವರನ್ನು ಪೂರ್ಣ ಹೃದಯದಿಂದ ಬೆಂಬಲಿಸಿ, ತಮ್ಮ ಪ್ರದೇಶದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು. ಅದನ್ನು ಆಲಿಸಿದ ಆಸಿಫ್ ರಾಜು ಸೇಠ್ ಅವರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.
ಉತ್ತಮ ಮೂಲಸೌಕರ್ಯ ಮತ್ತು ಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡುವ ಕುರಿತು ಇವರು ಮಾತನಾಡಿದರು.
ಮಾಜಿ ಶಾಸಕ ಫಿರೋಜ್ ಸೇಠ್ ಮಾತನಾಡಿ, ಬೆಳಗಾವಿ ಜನರ ಸೇವೆ ಮಾಡುತ್ತಿರುವುದು ನಮಗೆ ತುಂಬಾ ಸಂತಸದ ವಿಷಯ.
ಸಹೋದರ ಆಸೀಫ್ ಸೇಠಗೆ ಮತ ನೀಡಿ ಗೆಲ್ಲಿಸುವಂತೆ ಜನತೆಯಲ್ಲಿ ಮನವಿ ಮಾಡಿಕೊಂಡರು.
