ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಒಂದು ಪಲ್ಟಿಯಾಗಿರುವ ಘಟನೆ ನಡೆದಿದೆ . 15ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಸ್ಸಿನ ಆಕ್ಸಿನ್ ತುಂಡಾಗಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.
ಸುಮಾರು 40ಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದರು. ಇವರಲ್ಲಿ 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ ಪವಾರ್ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಇದಾಗಿದ್ದು, ಮತಕೇಂದ್ರಕ್ಕೆ ಹೋಗುವಾಗ ದಾರಿ ಮಧ್ಯೆ ಈ ಘಟನೆ ಸಂಭವಿಸಿದೆ.ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ದೂರು ದಾಖಲಾಗಿದೆ.