ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿರುವ ಬೆನ್ನಲ್ಲೇ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದೀಗ ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ .ಐಟಿ ದಾಳಿಗೆ ಒಳಗಾಗಿರುವ ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸಹೋದರ ಎಂದು ತಿಳಿದು ಬಂದಿದೆ.