ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ವಿಚಾರ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಗ್ಗೆ ಪ್ರಣಾಳಿಕೆ ಅಧ್ಯಕ್ಷರು ಸ್ಪಷ್ಟನೆ ನೀಡುತ್ತಾರೆ ಎಂದು ಹೇಳಿದ್ದಾರೆ.ಬಜರಂಗದಳ ನಿಷೇಧ ವಿಚಾರವಾಗಿ ಪ್ರಣಾಳಿಕೆ ಅಧ್ಯಕ್ಷರು ಮಾತನಾಡುತ್ತಾರೆ. ನಾನು ಪದೇ ಪದೇ ಹೆಚ್ಚು ಮಾತನಾಡಲು ಹೋಗಲ್ಲ ಎಂದು ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೆ ವೇಳೆ ಖರ್ಗೆ ಅವರು ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ಟಕ್ಕರ್ ಕೊಟ್ಟರು , ರಾತ್ರಿ ಮಟನ್ ತಿಂದು ಹಗಲಲ್ಲಿ ನಾನ್ ವೆಜ್ ಅಂತಾ ಬೈತಾರೆ. ಬಿಜೆಪಿ ಜನರ ಭಾವನಾತ್ಮಕ ವಿಚಾರದ ಮೇಲೆ ಆಟವಾಡುತ್ತಿದೆ. ಜಗಳ ಹಚ್ಚಿ ವೋಟ್ ಪಡೆಯುವುದು ಸರಿಯಲ್ಲ. ಇಂತಹ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದರು.