September 17, 2024

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಹೇಳಿರುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ.ಇದರಲ್ಲಿ ತಪ್ಪೇನಿದೆ ಎಂದು ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯವಾಗಿದೆ. ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *