December 7, 2024

ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿದೆ. ಅದಾ ಶರ್ಮಾ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದಲ್ಲಿನ ವಿಷಯಗಳು ವಿವಾದ ಹುಟ್ಟುಹಾಕಿವೆ. ಕೇರಳದಲ್ಲಿನ ಸಾವಿರಾರು ಮಹಿಳೆಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ನಂತರ ಐಸಿಸ್​ ಉಗ್ರ ಸಂಘಟನೆಗೆ ಸೇರಿಸಲಾಗಿದೆ ಎಂಬ ವಿಷಯವನ್ನು ಈ ಟ್ರೇಲರ್​ನಲ್ಲಿ ತೋರಿಸಲಾಗಿದೆ. ಅದೇ ಈಗ ವಿವಾದಕ್ಕೆ ಕಾರಣ ಆಗಿದೆ. ಇಷ್ಟೆಲ್ಲ ವಿವಾದ ಎಬ್ಬಿಸಿರುವ ಈ ಸಿನಿಮಾದಲ್ಲಿ ಇರುವ ಮಾಹಿತಿ ನಿಜವೋ ಸುಳ್ಳೋ ಎಂಬ ಬಗ್ಗೆ ಚರ್ಚೆ ಆಗುತ್ತಿದೆ. ಇದರಲ್ಲಿನ ಮಾಹಿತಿ ನಿಜ ಎಂದು ಸಾಬೀತು ಮಾಡಿದರೆ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮುಸ್ಲಿಂ ಯೂತ್​ ಲೀಗ್​ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಕೂಡ ಪ್ರತಿಕ್ರಿಯೆ ನೀಡಿವೆ. ಮಾಹಿತಿ ಸುಳ್ಳು ಎಂದು ಸಾಬೀತು ಮಾಡಿದರೆ 10 ಕೋಟಿ ರೂಪಾಯಿ ನೀಡುವುದಾಗಿ ಹಿಂದೂ ಸೇವಾ ಕೇಂದ್ರದ ಸ್ಥಾಪಕ ಪ್ರತೀಶ್​ ವಿಶ್ವನಾಥ್​ ಘೋಷಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಸುದೀಪ್ತೊ ಸೇನ್ ನಿರ್ದೇಶನ ಮಾಡಿದ್ದಾರೆ. ವಿಫುಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಅದಾ ಶರ್ಮಾ ಜೊತೆ ಯೋಗಿತಾ ಬಿಹಾನಿ, ಸೋನಿಯಾ ಬಲಾನಿ, ಸಿದಿ ಇದ್ನಾನಿ ಮುಂತಾದವರು ನಟಿಸಿದ್ದಾರೆ . ಈ ಸಿನಿಮಾ ನೈಜ ಘಟನೆ ಆಧಾರಿತವಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ. 2022ರಲ್ಲಿ ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕೂಡ ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಅದೇ ರೀತಿ ‘ದಿ ಕೇರಳ ಸ್ಟೋರಿ’ ಕೂಡ ಹೈಪ್​ ಪಡೆಯುವ ಸಾಧ್ಯತೆ ಇದೆ. ಈ ಚಿತ್ರವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
.ಮೇ 5ರಂದು ‘ದಿ ಕೇರಳ ಸ್ಟೋರಿ’ ಬಿಡುಗಡೆ ಆಗಲಿದೆ

‘ದಿ ಕೇರಳ ಸ್ಟೋರಿ’ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಕೋಡಾ ಸಲ್ಲಿಸಲಾಗಿತ್ತು.ಆದರೆ ಆ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ.

Leave a Reply

Your email address will not be published. Required fields are marked *