ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇಂದಿನಿಂದ ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಈ ಹಿನ್ನೆಲೆ ಮೇ.09 ಮತ್ತು 10ರಂದು ಭಾರೀ ಮಳೆಯಾಗಬಹುದು. ಮೇ 10ರಂದು ಮತದಾನಕ್ಕೆ ತೆರಳುವವರಿಗೆ ಮಳೆಯಿಂದ ಸಮಸ್ಯೆ ಉಂಟಾಗಬಹುದು.5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಮೇ.08 ರಿಂದ 12ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್, ಕೊಪ್ಪಳ ಜಿಲ್ಲೆಯ ಕೆಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.