June 19, 2025
11

ಬೇರೆ ಜಿಲ್ಲೆಗಳಿಂದ ನಾವು ಮಾಹಿತಿ ಪಡೆದಾಗ 127 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ನನ್ನ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 127 ರಿಂದ 130 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಕರ್ನಾಟಕದಲ್ಲಿ 35 ವರ್ಷಗಳಿಂದ ಸತತವಾಗಿ ಒಂದೇ ಸರ್ಕಾರ ಎರಡು ಬಾರಿ ಅಧಿಕಾರಕ್ಕೆ ಬಂದಿಲ್ಲ ಎಂದರು.ರಾಜ್ಯದಲ್ಲಿ ಅನೇಕ ಸಮೀಕ್ಷೆಗಳು ಕಾಂಗ್ರೆಸ್ ಗೆ ಬಹುಮತ ಎಂದು ಹೇಳಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ 127 ರಿಂದ 130 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕರು ಹಾಗೂ ನಿಷ್ಠಾವಂತರಿಗೆ ನಿರ್ಲಕ್ಷ್ಯ ಆಗಿದೆ. ವ್ಯಾಪಾರೀಕರಣದಿಂದ ಬಿಜೆಪಿ ಪಕ್ಷಕ್ಕೆ ಬಹಳ ದೊಡ್ಡದಾದ ಹಾನಿಯಾಗಿದೆ. ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳಿಂದ ಬಡವರು, ಕಾರ್ಮಿಕರಿಗೆ ಬಹಳಷ್ಟು ಆಶಾ ಕಿರಣ ಮೂಡಿದೆ. ಬಡವರು ಕಾರ್ಮಿಕರು ಹಾಗೂ ಮಧ್ಯಮ ವರ್ಗದವರು ಜನಪ್ರಿಯ ಯೋಜನೆಗಳಿಂದ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

Leave a Reply

Your email address will not be published. Required fields are marked *