ಚಿಕ್ಕಮಗಳೂರಿನ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಟಿ.ರವಿ ಅವರಿಗೆ ಇದ್ದಕ್ಕಿದ್ದಂತೆ ನಿನ್ನೆ ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು , ದಿಢೀರ್ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿ.ಟಿ ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಇವರು , ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ರಾಜ್ಯದ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆ ಸೇರಿದ್ದಾರೆ.
ಈ ಹಿಂದೆಯೂ ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಆಸ್ಪತ್ರೆಗೆ ಸೇರಿದ್ದರು. ಆಗ ವೈದ್ಯರು ಯಾವುದೇ ತೊಂದರೆ ಇಲ್ಲ ಎಂದಿದ್ದರು. ಆದರೆ ಇದೀಗ ಮತ್ತೆ ಕಿಡ್ನಿ ಸಮಸ್ಯೆಯಿಂದ ಆರೋಗ್ಯ ಕೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಹಲವಾರು ಕಡೆ ಸುತ್ತಿದ್ದರು. ಅಲ್ಲದೆ ಕಾರ್ಯಕರ್ತರ ಜೊತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೂಡ ಮಾಡಿದ್ದರು. ಇದೀಗ ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸವಾಗಿ ಆಸ್ಪತ್ರೆ ಸೇರ ಬೇಕಾಗಿದೆ .