ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಇದೀಗ ಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಭಾನುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ
ಭಾನುವಾರ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ ಉಸ್ತುವಾರಿ ರಣದೀಪ್ ಸುರ್ಜೇವಾಲ, ಶಾಸಕಾಂಗ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿದೆ. ಅದನ್ನು ಸಿದ್ದರಾಮಯ್ಯ ಮಂಡಿಸಿದ್ದು, ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರೂ ಅನುಮೋದಿಸಿದ್ದಾರೆ. ಸೋಮವಾರ ಬೆಳಿಗ್ಗೆಯೂ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದು ಸುರ್ಜೇವಾಲ ಮಾಹಿತಿ ನೀಡಿದ್ದಾರೆ.
ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಹ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರೇ ನಿರ್ಧರಿಸಿದರೆ ಗೊಂದಲ ಆಗುವುದಿಲ್ಲ. ಹೀಗಾಗಿ ಅವರೇ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬ ತೀರ್ಮಾನಕ್ಕೆ ವೀಕ್ಷಕರು ಬಂದಿದ್ದಾರೆ ಎನ್ನಲಾಗಿದೆ