ಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಅಂಗಳ ತಲುಪಿದ್ದು, ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ರಾತ್ರಿ ಅಥವಾ ನಾಳೆ ತೆರೆ ಬಿಳುವ ಸಾಧ್ಯತೆ ಇದೆ. ಮೇ 17 ಅಥವಾ 18ರಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲುವು ಪಡೆದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಕಸರತ್ತು ನಡೆದಿದ್ದು, ಸಿಎಂ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ನಡುವೆ ಮೇ 17 ಅಥವಾ 18ರಂದು ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ನೂತನ ಸಿಎಂ ಪ್ರಮಾಣವಚನದ ಜೊತೆಗೆ ಕೆಲ ಹಿರಿಯ ಶಾಸಕರು ಸಚಿವರಾಗಿ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.