ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರ ಒಂದು ತಂಡವು ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದ್ದು ಹಲ್ಲೆಗೊಳಗಾದ ವ್ಯಕ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಪೆರಾಡಿ ಪಾಡಿ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ವಯಸ್ಸು (42) ಹಲ್ಲೆಗೊಳಗಾದವರು. ವಿಜಯೋತ್ಸವ ಮೆರವಣಿಗೆಯ ವೇಳೆ ದಯಾನಂದ ಪೂಜಾರಿ ಅವ ರನ್ನು ಬಲವಂತವಾಗಿ ವಿಜಯೋತ್ಸವ ದಲ್ಲಿ ಪಾಲ್ಗೊಳ್ಳುವಂತೆ ಎಳೆದೊಯ್ದು ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ದಯಾನಂದ ಪೂಜಾರಿ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಘಟನೆಯ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.