
ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿವಿನೋದ ಅಸೂಟಿ ಅವರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಅವರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಲು ವಾರ್ಡ್ ನಂ. 51 ರ ಗೋಕುಲ್ ರಸ್ತೆಯ ನಾವಳ್ಳಿ ಪ್ಲಾಟ್‌ನಲ್ಲಿ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಸೆಂದಿಲ್ ಕುಮಾರ್, ಮಲ್ಲಿಕಾರ್ಜುನ ಮುತ್ತಗಿ, ರಘುವೀರ್ ಪಾಟೀಲ್ ಹಾಗೂ ಇತರರು ಉಪಸ್ಥಿತರಿದ್ದರು.