September 19, 2024

ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಪುಟಾಣಿಗಳು ಹಾಗೂ ಭಾರತ್ ನಗರ ಅಭಿವೃದ್ಧಿ ಸಮಿತಿಯ ಸದಸ್ಯರು ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು.

ಧಾರವಾಡ ನಗರದ ಭಾರತ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ. 7 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಅಮೂಲ್ಯವಾದ ಹಕ್ಕು ಚಲಾಯಿಸಬೇಕು ಎಂದು ಬೋರ್ಡ್ ಹಿಡಿದು ಜಾಗೃತಿ ಮೂಡಿಸಿದರು.

Leave a Reply

Your email address will not be published. Required fields are marked *