ಧಾರವಾಡ : ಹನುಮರಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ವ್ಯಾಪ್ತಿಯ ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯಲ್ಲಿ ಧಾರವಾಡ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದರು.
ಸಮಾಜದಲ್ಲಿ ಅಶಾಂತಿ ಮೂಡಿಸಿ ಧರ್ಮಗಳ ಮಧ್ಯೆ ಬಿರುಕು ಮೂಡಿಸುವ ಕೆಲಸ ಬಿಜೆಪಿ ಹಾಗೂ ಅದರ ನಾಯಕರುಗಳು ಮಾಡುತ್ತಾ ಬಂದಿದ್ದಾರೆ. ದೇಶದಲ್ಲಿ ಶಾಂತಿ ನೆಲೆಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾನಗಲ್ ಕ್ಷೇತ್ರದ ಶಾಸಕ ಶ್ರೀ ಶ್ರೀನಿವಾಸ ಮಾನೆ, ಶ್ರೀ ಯಾಸೀರ ಅಹ್ಮದ ಖಾನ ಪಠಾಣ, ಸೋಮಣ್ಣ ಬೇವಿನಮರದ, ಬಿ.ಸಿ ಪಾಟೀಲ್, ಎಸ್ ಜೆ ಮುಲ್ಲಾ, ಶಿವಾನಂದ ರಾಮಗೇರಿ, ಪ್ರದೀಪಕುಮಾರ ಗಿರಡ್ಡಿ, ಗುರನಗೌಡ ಪಾಟೀಲ, ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯರು ಮತ್ತು ಹಿರಿಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.