ನವಲಗುಂದ : ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದು ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಲ್ಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ ಧನವಾಡಕರ ಸಲಹೆ ನೀಡಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪಂಜಿನ ಮೆರವಣಿಗೆ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಜ್ಞಾವಂತ ಮತದಾರರು ತಪ್ಪದೆ ಮತದಾನ ಮಾಡಿ ಎಂದರು.
ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ಮೂಲಕ ಜಾಗೃತಿ ನಡೆಸಿ ಹಣಕ್ಕೆ ಮತ ಮಾರಿಕೊಳ್ಳಬೇಡಿ, ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಅರ್ಹರಿಗೆ ಮತ ನೀಡಿ, ಮತದಾನ ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ತಾ ಪಂ ಸಹಾಯಕ ನಿರ್ದೇಶಕ ಹರ್ಷವರ್ಧನ್ ಹಂಚಿನಾಳ, ಎಸ್ ಬಿ ಪಾಟೀಲ್, ಜಗದೀಶ್ ಕನವಿ, ಸಿ ಆರ್ ನಮಸ್ತೆಮಠ, ಸುಭಾಸ್ ಮಂಗಳಿ, ಅಂಗನವಾಡಿ ಕಾರ್ಯಕರ್ತೆಯರಾದ ಭಾರತಿ ಹಳೆಮನಿ ಇತರರು ಉಪಸ್ಥಿತರಿದ್ದರು.