August 19, 2025
IMG_20240430_145006

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಗೋಕುಲ ರಸ್ತೆಯಲ್ಲಿರುವ ಡೆನಿಸನ್ಸ್ ಹೋಟೆಲ್ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದ ಘಟನೆ ನಡೆಯಿತು.

ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ್ ಪಾಟೀಲ, ಪಾಲಿಕೆ‌ ಸದಸ್ಯೆ ಸುವರ್ಣ ಕಲ್ಲಕುಂಟ್ಲ, ಪ್ರೇಮನಾಥ ಚಿಕ್ಕತುಂಬಳ, ಇತರರ ಮೇಲೆ ಹಲ್ಲೆ ನಡೆಸಲಾಗಿದೆ.
ಹೋಟೆಲ್ ಆವರಣದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿತ್ತು. ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ ರೇವಣ್ಣ ಅವರನ್ನು ದೇಶಕ್ಕೆ ವಾಪಸ್ ಕರೆತರಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೋರ್ ಕಮಿಟಿ ಹಾಗೂ ಸುದ್ದಿಗೋಷ್ಠಿ ಮುಗಿದ ಬಳಿಕ ಹೊರಗೆ ಬಂದ ಜೆಡಿಎಸ್ ಹಾಗೂ ಪ್ರತಿಭಟನೆ ನಿರತರ ನಡುವೆ ಮುಖಾಮುಖಿ ಆಯಿತು. ಬಳಿಕ ಉಭಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ತೀವ್ರ ವಾಗ್ವಾದ ನಡೆಯಿತು. ಪರಸ್ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಎರಡು ಪಕ್ಷದ ನಾಯಕರು ಕೈ ಕೈ ಮಿಲಾಯಿಸಿದರು.

ಸ್ಥಳೀಯ ಪೊಲೀಸ್ ಎರಡು ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತ ನಿಯಂತ್ರಿಸಲು ಹರಸಾಹ ಪಟ್ಟರು. ಕಾಂಗ್ರೆಸ್ ಕಾರ್ಯಕರ್ತರು ಗೋ ಬ್ಯಾಕ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರೇ, ಜಿಡಿಎಸ್ ಮುಖಂಡರು ಸರ್ಕಾರದ ವಿರೋಧ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊನೆಯಲ್ಲಿ ಪೋಲಿಸ್ ರು ಕಾಂಗ್ರೆಸ್ ನ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ವ್ಯಾನ್ ನಲ್ಲಿ ತುಂಬಿಕೊಂಡು ಹೋದರು.

Leave a Reply

Your email address will not be published. Required fields are marked *