October 13, 2025
IMG-20240501-WA0038

ಧಾರವಾಡ: ರಸ್ತೆ ಅಪಘಾತದಲ್ಲಿ ಗಾಯಗೊಂಡವನ ಪ್ರಾಣ ಉಳಿಸಿ, ಮಾನವೀಯತೆ ಮೆರೆದ ಧಾರವಾಡ ಗ್ರಾಮೀಣ ಶಾಸಕ ಹಾಗೂ ನಿಗಮ ಮಂಡಳಿ ಅಧ್ಯಕ್ಷ ವಿನಯ ಕುಲಕರ್ಣಿ ಅವರು.

ದಾವಣಗೇರಿ ಕಾಂಗ್ರೆಸ ‌ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ಕಾರ್ಯ ಮಾಡಲು ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ವಿನಯ ಕುಲಕರ್ಣಿ ಹೋಗಿದ್ದರು.‌

ಲೋಕಸಭೆ ಚುನಾವಣೆ ನಿಮಿತ್ತ ಪ್ರಚಾರ ಕಾರ್ಯ ಮುಗಿಸಿಕೊಂಡು‌ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಾಪಸ ಬರುತ್ತಿದ್ದ ಸಮಯದಲ್ಲಿ ಹರಿಹರದ ಸಮೀಪ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು,  ತಕ್ಷಣವೇ ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಿ, ಅಂಬ್ಯೂಲೆನ್ಸ ವ್ಯವಸ್ಥೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *