ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪರವಾಗಿ, ಚುನಾವಣಾ ಪ್ರಚಾರಕ್ಕೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.
ಇಂದು ಸಾಯಂಕಾಲ ಜೋಶಿ ಅವರ ಪರವಾಗಿ, ಚುನಾವಣೆ ಪ್ರಚಾರಕ್ಕಾಗಿ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಈಗಾಗಲೇ ನೆಹರೂ ಮೈದಾನದಲ್ಲಿ ಸಕಲ ಸಿದ್ಧತೆ ನಡೆದಿದ್ದು, ಬೃಹತ್ತಾದ ವೇದಿಕೆ ಆಸನದ ವ್ಯವಸ್ಥೆ ಕೂಡ ಮಾಡಲಾಗಿದೆ. ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಮಾಡಲಾಗಿದೆ.