ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಮಹಿಳಾ ಸಂಯೋಜಕರಾಗಿ ಜ್ಯೋತಿ ವಾಲಿಕಾರ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರ್ಕೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ ನೇತೃತ್ವದ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲಗನಿ ವಲಿಅಹ್ಮದ್ ಅವರು ನೂತನ ಸಮಿತಿ ಜಿಲ್ಲಾ ಮಹಿಳಾ ಸಂಯೋಜಕರಾಗಿ ಜ್ಯೋತಿ ವಾಲಿಕಾರ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.