July 12, 2025
IMG-20240502-WA0061

ನವಲಗುಂದ: ಚುನಾವಣಾ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳ್ಳುವಲ್ಲಿ ಪಿಆ‌ರ್ ಓ ಮತ್ತು ಅವರ ತಂಡಗಳ ಕಾರ್ಯ ಮುಖ್ಯವಾಗಿದ್ದು, ತರಬೇತಿಯಲ್ಲಿ ಇವಿಎಂ ಮತ್ತು ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು, ಯಾವುದೇ ರೀತಿಯಲ್ಲಿ ಚುನಾವಣಾ ಕರ್ತವ್ಯ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಪಟ್ಟಣದ ಶಂಕರ ಕಾಲೇಜದಲ್ಲಿನ ತರಬೇತಿಯಲ್ಲಿ ಭಾಗವಹಿಸಿ, ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನ ದಿನ ಬಹು ಮುಖ್ಯವಾಗಿದೆ. ಅಂದು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಮತ್ತು ಅವರ ತಂಡ ಮೈ ಎಲ್ಲಾ ಕಣ್ಣಾಗಿ ಕೆಲಸ ಮಾಡಬೇಕು. ಚುನಾವಣಾ ಆಯೋಗ ನೀಡಿರುವ ಎಲ್ಲ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದರು.

Leave a Reply

Your email address will not be published. Required fields are marked *