ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಬಿವಿಬಿ ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ನೇಹಾ ನಿವಾಸಕ್ಕೆ ಇಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಭೇಟಿ ನೀಡಿದರು.
ಈ ವೇಳೆ ನೇಹಾ ತಂದೆ ನಿರಂಜನ ಹಿರೇಮಠ ತಾಯಿ ಗೀತಾ ಹಿರೇಮಠ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವುದರ ಮೂಲಕ ಧೈರ್ಯ ತುಂಬುವ ಕೆಲಸ ಮಾಡಿದರು. ಈ ಸಂದರ್ಭದಲ್ಲಿ ಅನೇಕರು ಭಾಗಿಯಾಗಿದ್ದರು.