
ಹುಬ್ಬಳ್ಳಿ: ನಗರದಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿ ಮಾಡಿ ಎಸ್ಕೆಪ್ ಆಗಿದ್ದ ಮುಸ್ಲಿಂ ಯುವಕನನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹು-ಧಾ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದರು.
ನಗರದಲ್ಲಿಂದು ಮಾತಾನಾಡಿದ ಅವರು, ಅಪ್ರಾಪ್ತ ಬಾಲಕಿ ಈಗಾಗಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಬಂಧನ ಮಾಡಲಾಗಿದೆ. ಕಾನೂನು ಪ್ರಕಾರ ತನಿಖೆ ನಡೆಯುತ್ತೆ. ಅಟ್ರಾಸಿಟಿ ಕೇಸ್ ಹಾಗೂ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದರು.