May 18, 2024

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರಿನ ಕೆಆರ್​ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ.

Leave a Reply

Your email address will not be published. Required fields are marked *