November 21, 2024

ಧಾರವಾಡ: ನಾಲ್ಕು ವರ್ಷಗಳ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡುತ್ತಿರುವುದು ಸಂತೋಷದ ಜೊತೆಗೆ ನೋವು ಸಹ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

ಧಾರವಾಡ ನಗರದಲ್ಲಿ ಮತದಾನ ಮಾಡಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇವತ್ತು ಉಚ್ಚ ನ್ಯಾಯಾಲಯ ಮತದಾನಕ್ಕೆ ಅವಕಾಶ ಕೊಟ್ಟಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ಮಾಡಲು ಅವಕಾಶ ಸಿಕ್ಕಿದೆ. ಉಚ್ಚ ನ್ಯಾಯಾಲಯಕ್ಕೆ ನಾನು ಅಭಿನಂದನೆ ಸಲ್ಲಿಸಿವೆ ಎಂದು ತಿಳಿಸಿದರು.

ನನ್ನ ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಸಿಕ್ಕಿರಲಿಲ್ಲ ಹಾಗೂ ಮತದಾನಕ್ಕೂ ಅವಕಾಶ ನೀಡಿರಲಿಲ್ಲ. ಈಗ ಲೋಕಾಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ವಿನೋದ ಅಸೂಟಿಗೆ ಮತ ಹಾಕಲು ಅವಕಾಶ ಸಿಕ್ಕಿದೆ. ನಿಜವಾಗಿಯೂ ಬಹಳ ಸಂತೋಷವಾಗಿದೆ. ನಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಾನು ಬರೋ ವಿಷಯವನ್ನು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ಮಾಧ್ಯಮಗಳು ನಾನು ಬರುವ ವಿಷಯ ತಿಳಿದು ಸುದ್ದಿ ಹಾಕಿರುವುದರಿಂದ ಬಹಳಷ್ಟು ಜನ ಕಾರ್ಯಕರ್ತರು ಬಂದಿದ್ದಾರೆ. ಇದಕ್ಕಾಗಿ ಮಾಧ್ಯಮಗಳಿಗೆ ಅಭಿನಂದನೆ ಹೇಳುವೆ ಎಂದರು.

ಸಹಜವಾಗಿಯೇ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಜೋಶ್ ಎದ್ದು ಕಾಣುತ್ತಿದೆ. 25 ವರ್ಷದಿಂದ ನಾನು ರಾಜಕೀದಯಲ್ಲಿದ್ದು, ಸಾರ್ವಜನಿಕ ಕ್ಷೇತ್ರದಲ್ಲಿ ಎಲ್ಲ ರಂಗದಲ್ಲಿ ಕೆಲಸ ಮಾಡಿದ್ದೇನೆ. ನಾನು ಕ್ಷೇತ್ರದಲ್ಲಿ ಇರಲಿಲ್ಲ. ಆದರೂ ಅಭಿಮಾನಿಗಳು ಗೆಲ್ಲಿಸಿದ್ದಾರೆ. ನಾನು ಕ್ಷೇತ್ರಕ್ಕೆ ಬರದಿದ್ದರೂ ಗೆದ್ದಿದ್ದೇನೆ. ಇದು ಕರ್ನಾಟಕದಲ್ಲಿಯೇ ಮಾದರಿ ಆಗಿದೆ ಎಂದರು.

Leave a Reply

Your email address will not be published. Required fields are marked *