ಬೆಂಗಳೂರು: ಕಿಡ್ನಾಪ್ ಕೇಸ್ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಹೌದು ಇಂದು ರೇವಣ್ಣ ಕಸ್ಟಡಿಯ ಅವಧಿ ಅಂತ್ಯವಾಗಿದ್ದು, SIT ಅಧಿಕಾರಿಗಳು ಇಂದು ಮತ್ತೆ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ಹೆಚ್.ಡಿ ರೇವಣ್ಣ ಅವರನ್ನು ಹಾಜರುಪಡಿಸಲಾಗಿದೆ. ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ ಅವರು ವಾದ ಮಂಡಿಸಿದ್ದಾರೆ.
ಈ ಮಧ್ಯೆ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ನ್ಯಾಯಾಲಯದಲ್ಲಿ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ಜನಪ್ರತಿನಿಧಿ ನ್ಯಾಯಾಲಯದಲ್ಲಿ ನ್ಯಾ. ಸಂತೋಷ್ ಗಜಾನನ ಭಟ್ ಅವರು ಮಹತ್ವದ ಆದೇಶ ನೀಡಿದ್ದಾರೆ. ಈ ಮೂಲಕ ರೇವಣ್ಣ ಅಲ್ಲಿಯವರೆಗೆ ಎಸ್‌ಐಟಿ ಕಸ್ಟಡಿಯಲ್ಲೇ ಇರಬೇಕಾಗುತ್ತದೆ.