ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಶೇ. 94 ಫಲಿತಾಂಶದೊಂದಿಗೆ ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ಶೇ. 50.59 ಫಲಿತಾಂಶದೊಂದಿಗೆ ಯಾದಗಿರಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಮಂಡಳಿ ವೆಬ್‌ಸೈಟ್ https://karresults.nic.inನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಹಾಜರಾಗಿದ್ದರು. ಕಳೆದ ವರ್ಷ ಶೇ.83.89 ಫಲಿತಾಂಶ ಪ್ರಕಟವಾಗಿತ್ತು.